Sunday, August 23, 2026

BDA Apartments

Home Front Page ರಾಜ್ಯ ಬಜೆಟ್: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಶಾಕ್.

ರಾಜ್ಯ ಬಜೆಟ್: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಶಾಕ್.

ಬೆಂಗಳೂರು,ಫೆಬ್ರವರಿ,16,2024(www.justkannada.in): ಮ‍ದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ತಟ್ಟಲಿದ್ದು ಬಿಯರ್ ಸೇರಿ ಎಲ್ಲಾ ಬ್ರಾಂಡ್ ಗಳ ಬೆಲೆ ಏರಿಸುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಮದ್ಯದ ಘೋಷಿತ ಸ್ಲಾಬ್‌ ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ ಸ್ಲಾಬ್‌ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದ್ದಾರೆ.

ಬಿಯರ್ ಸೇರಿ ಎಲ್ಲಾ ಬ್ರಾಂಡ್ ಗಳ ಬೆಲೆ ಹೆಚ್ಚಳ ಮಾಡಲಾಗುವುದು.  ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: State budget-Another -shock – liquor drinkers.