Friday, August 21, 2026

BDA Apartments

Home Front Page ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ಫಿಕ್ಸ್.

ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ಫಿಕ್ಸ್.

ಬೆಂಗಳೂರು, ಫೆಬ್ರವರಿ,19,2024(www.justkannada.in):   ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ  ದಿನಾಂಕ ಫಿಕ್ಸ್ ಆಗಿದ್ದು,  ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಕರಗ ಮಹೋತ್ಸವ ನಡೆಯಲಿದೆ.

ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ  ಅವರು ಕರಗ ಹೊರಲಿದ್ದಾರೆ. ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ.

ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.

Key words: Date -fixed -Bangalore -Karaga- Mahotsava