Friday, August 7, 2026

BDA Apartments

Home Front Page ಖರ್ಗೆ ಮಾತಿಗೆ ಇಂಡಿಯಾ ಒಕ್ಕೂಟದಲ್ಲಿ ಕಿಮ್ಮತ್ತಿಲ್ಲ-ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್.

ಖರ್ಗೆ ಮಾತಿಗೆ ಇಂಡಿಯಾ ಒಕ್ಕೂಟದಲ್ಲಿ ಕಿಮ್ಮತ್ತಿಲ್ಲ-ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್.

ಹುಬ್ಬಳ್ಳಿ,ಫೆಬ್ರವರಿ,20,2024(www.justkannada.in):  ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಅಲ್ಲ100 ಸ್ಥಾನಗಳನ್ನೂ ಗೆಲ್ಲಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆಗೆ ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಇಂಡಿಯಾ ಒಕ್ಕೂಟದಲ್ಲಿ ಕಿಮ್ಮತ್ತಿಲ್ಲ. ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವಷ್ಟು ಕ್ಷೇತ್ರಗಳನ್ನ ಉಳಿಸಿಕೊಳ್ಳಲಿ. ನೀವು 100 ಸೀಟ್ ಗಳ ಬಗ್ಗೆ ಮಾತಾಡೋಕೆ ಹೋಗಬೇಡಿ ಎಂದು ತಿರುಗೇಟು ನೀಡಿದರು.

Key words: Mallikarjuna Kharge- words – no value – India-union-Former CM -Jagdish Shettar