Sunday, August 23, 2026

BDA Apartments

Home Front Page ಘೋಷಣೆಗೂ ಮುನ್ನವೇ ಮಂಡ್ಯ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗ..?

ಘೋಷಣೆಗೂ ಮುನ್ನವೇ ಮಂಡ್ಯ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗ..?

ಮಂಡ್ಯ, ಫೆಬ್ರವರಿ,22,2024(www.justkannada.in):  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ಮಧ್ಯೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗವಾಗಿದೆ.

ಹೌದು ಹೈಕಮಾಂಡ್ ಘೋಷಣೆಗೂ ಮುನ್ನ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯದ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಅವರ ಪರ ಪ್ರಚಾರವನ್ನೂ ಆರಂಭಿಸಿದ್ದಾರೆ.

ನಾಗಮಂಗಲದ ಉದ್ಯಮಿ ಸ್ಟಾರ್ ಚಂದ್ರು ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕ್ಷೇತ್ರದ ಮತದಾರರಿಗೆ ಶಾಸಕರ ರವಿ ಗಣಿಗ ಅವರು ಪರಿಚಯ ಮಾಡಿಕೊಡುತ್ತಿದ್ದಾರೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆಗೆ ಸ್ಟಾರ್ ಚಂದ್ರು ಅವರನ್ನು ನಿಲ್ಲಿಸುತ್ತಿದ್ದೇವೆ. ಆಶೀರ್ವಾದ ಮಾಡುವಂತೆ ರವಿ ಗಣಿಗ ಮನವಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Mandya LokSabha- Congress –candidate- name- revealed