Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಪಾಕ್ ಪರ ಘೋಷಣೆ ಆರೋಪ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಬಿಜೆಪಿ ಪ್ರತಿಭಟನೆ.

ಪಾಕ್ ಪರ ಘೋಷಣೆ ಆರೋಪ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಬಿಜೆಪಿ ಪ್ರತಿಭಟನೆ.

ಮಂಗಳೂರು,ಫೆಬ್ರವರಿ,28,2024(www.justkannada.in): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ ಬಳಿಕ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಮಲ್ಲಿಕಟ್ಟೆ ಬಳಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಾಸಿರ್ ಹುಸೇನ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿದ್ದು ಇದು ದೇಶ ವಿರೋಧಿ ಸರ್ಕಾರ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕಚೇರಿ ಮುಂದೆ ಹೈಡ್ರಾಮಾ ನಡೆದಿದ್ದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.

Key words: Accused – pro-Pak- declaration-BJP- protest – Congress office-mangalore