Sunday, September 20, 2026

BDA Apartments

ಪಾಕ್ ಪರ ಘೋಷಣೆ ಸಾಬೀತಾದ್ರೆ ತಪ್ಪಿತಸ್ಥರ ವಿರುದ್ದ ಕ್ರಮ- ಸಿಎಂ ಸಿದ್ದರಾಮಯ್...
Home Front Page ಪಾಕ್ ಪರ ಘೋಷಣೆ ಸಾಬೀತಾದ್ರೆ ತಪ್ಪಿತಸ್ಥರ ವಿರುದ್ದ ಕ್ರಮ- ಸಿಎಂ ಸಿದ್ದರಾಮಯ್ಯ.

ಪಾಕ್ ಪರ ಘೋಷಣೆ ಸಾಬೀತಾದ್ರೆ ತಪ್ಪಿತಸ್ಥರ ವಿರುದ್ದ ಕ್ರಮ- ಸಿಎಂ ಸಿದ್ದರಾಮಯ್ಯ.

ಬೆಂಗಳೂರು, ಫೆಬ್ರವರಿ 28,2024(www.justkannada.in):  ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಪಾಕ್ ಪರ ಘೋಷಣೆ ಕೂಗಿದ್ದು ಸಾಬೀತಾದರೇ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.ಪಾಕ್ ಪರ ಘೋಷಣೆ ಸಾಬೀತಾದ್ರೆ ತಪ್ಪಿತಸ್ಥರ ವಿರುದ್ದ ಕ್ರಮ siddaramaiah123

ಘಟನೆ ಸಂಬಂಧ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕೆಲವರು ‘ನಾಸಿರ್ ಸಾಬ್’ ಎಂಬ ಘೋಷಣೆ ಕೂಗಲಾಗಿದೆ ಎಂದರೆ, ಇನ್ನು ಕೆಲವರು ‘ಪಾಕಿಸ್ತಾನ’ ಪರ ಘೋಷಣೆ ಎನ್ನುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದಾರೆ.

Key words: Vidhansoudha-pak-pro-slogan-CM-Siddaramaih