Thursday, August 27, 2026

BDA Apartments

Home Front Page ಮತ್ತೊಮ್ಮೆ ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ- ಸಂಸದ ಶ್ರೀನಿವಾಸ್ ಪ್ರಸಾದ್ ವಿಶ್ವಾಸ.

ಮತ್ತೊಮ್ಮೆ ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ- ಸಂಸದ ಶ್ರೀನಿವಾಸ್ ಪ್ರಸಾದ್ ವಿಶ್ವಾಸ.

ಮೈಸೂರು,ಫೆಬ್ರವರಿ,29,2024(www.justkannada.in): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಎನ್ ಡಿಎ ಮೈತ್ರಿಕೂಟವೇ ಅಧಿಕಾರಕ್ಕೆ ಬರಲಿದೆ  ಎಂದು  ಸಂಸದ ವಿ ಶ್ರೀನಿವಾಸ್ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಈ ಮಾತನ್ನ INDIA ಮೈತ್ರಿಕೂಟದ ನಾಯಕರೇ ಹೇಳುತ್ತಿದ್ದಾರೆ. ನಾನು 25 ವರ್ಷ ಕಾಲ ಕಾಂಗ್ರೆಸ್ ನಲ್ಲಿದ್ದವನು. ಮುಂದೊಂದು ದಿನ ಕಾಂಗ್ರೆಸ್ ಗೆ ಇಂತಹ ದುಸ್ಥಿತಿ ಬರುತ್ತದೆ ಎಂದು ಊಹೆ ಕೂಡ ಮಾಡಿರಲಿಲ್ಲ ಎಂದು ಹೇಳಿದರು.

ತುರ್ತು ಪರಿಸ್ಥಿತಿ ಬಳಿಕ ಕಾಂಗ್ರೆಸ್ ಗೆ ಪರ್ಯಾಯವಾಗಿ ಜನತಾ ಪಕ್ಷ ಉದಯವಾದರೂ ಅದು ಮುಂದೆ ಬೆಳೆಯಲಿಲ್ಲ. ಆದರೀಗ ಕಾಂಗ್ರೆಸ್ ಗೆ ಪರ್ಯಾಯವಾಗಿ ಬಿಜೆಪಿ ದೊಡ್ಡ ಪಕ್ಷವಾಗಿ ಬೆಳೆದಿದೆ. ಪರಿಣಾಮ ಕಾಂಗ್ರೆಸ್ ದುಸ್ಥಿತಿಗೆ ತಲುಪಿದೆ. ಕಾಂಗ್ರೆಸ್ ಗೆ ಇಂತಹ ದುಸ್ಥಿತಿ ಬರುತ್ತದೆಂದು ನಾನು ನಿರೀಕ್ಷಿಸಿರಲಿಲ್ಲ. ಕಾಂಗ್ರೆಸ್ ನ ಅನೇಕ ನಾಯಕರಿಗೆ ಅವಕಾಶ ನೀಡಲಿಲ್ಲ. ಇವೆಲ್ಲವೂ ಕೂಡ ಇಂದು ಕಾಂಗ್ರೆಸ್ ನ ದುಸ್ಥಿತಿಗೆ ಕಾರಣವಾಗಿದೆ ಎಂದು ಸಂಸದ ವಿ ಶ್ರೀನಿವಾಸಪ್ರಸಾದ್ ತಿಳಿಸಿದರು.

Key words: Once –again- NDA -alliance – power-MP -Srinivas Prasad