Friday, August 21, 2026

BDA Apartments

Home Front Page ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಿಗಿ ಭದ್ರತೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಿಗಿ ಭದ್ರತೆ.

ಬೆಂಗಳೂರು, ಮಾರ್ಚ್​,2,2024(www.justkannada.in): ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ನಡೆದ ಬಾಂಬ್ ಸ್ಫೋಟ  ಬೆನ್ನಲ್ಲೆ ಬೆಂಗಳೂರಿನ ಹಲವು ಕಡೆಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದು ಇಂದು ವುಮೆನ್ಸ್ ಪ್ರೀಮಿಯರ್ ಲೀಗ್​ ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ.

ಇಂದು ಸಂಜೆ 7.30ಕ್ಕೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ತಂಡಗಳ ನಡುವೆ ಪಂದ್ಯ ನಡೆಯಲಿದ್ದು, ಹೀಗಾಗಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಸ್ಟೇಡಿಯಂ ಮುಖ್ಯದ್ವಾರ, ರಸ್ತೆ ಅಕ್ಕಪಕ್ಕದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.  ಮೈದಾನದ ಸುತ್ತಮುತ್ತ ಪೊಲೀಸರು ನಿಗಾ ವಹಿಸಿದ್ದು, ಅಲ್ಲದೆ ಮೆಜೆಸ್ಟಿಕ್‌ ನ ಬಿಎಂಟಿಸಿ, ಕೆಎಸ್‌ಆರ್‌ ಟಿಸಿ ಬಸ್ ನಿಲ್ದಾಣಗಳಲ್ಲಿಯೂ ಖಾಕಿ ಪಡೆ ಅಲರ್ಟ್‌ ಆಗಿದ್ದಾರೆ.

Key words: Rameswaram Cafe -Bomb Blast- Case-Tight security – Chinnaswamy Stadium-WPL