ಬೆಂಗಳೂರು, ಮಾರ್ಚ್,4,2024(www.justkannada.in): ಪಾಕ್ ಪರ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆ ನೀಡಿರುವ ಎಫ್ಎಸ್ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಬಿಜೆಪಿಗೆ  ಗೃಹ ಸಚಿವ ಡಾ.ಜಿ. ಪರಮೇಶ್ವರ್  ಟಾಂಗ್ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಸರ್ಕಾರದ ಎಫ್ಎಸ್ಎಲ್, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ  ಕೂಗಿರುವುದು ಧೃಡವಾದರೆ ತಪ್ಪಿತಸ್ಥರ ವಿರುದ್ದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ವಿಚಾರ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಭೆ ಮಾಡಿ ಈಗಾಗಲೇ ಎಲ್ಲವನ್ನೂ ಹೇಳಿದ್ದೇನೆ. ಕೆಲ ವಿಚಾರ ಹಂಚಿಕೊಳ್ಳಲು ಆಗಲ್ಲ. ಎನ್ಐಎ ಈಗಾಗಲೆ ತನಿಖೆ ಆರಂಭಿಸಿದ್ದಾರೆ, ಎನ್ಎಸ್ ಜಿ ಕೂಡ ತನಿಖೆ ನಡೆಸುತ್ತಿದೆ. ಇದರ ಹಿಂದೆ ಯಾರಿದ್ದಾರೆ ಎಂದು ಎಲ್ಲವನ್ನೂ ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು.
Key words: Private- FSL -report -not taken – Home Minister –Dr. G Parameshwar
 
            