Sunday, August 23, 2026

BDA Apartments

Home Front Page ಕಾಂಗ್ರೆಸ್ ಮಾಜಿ ಶಾಸಕ ವಾಸು ನಿಧನ.

ಕಾಂಗ್ರೆಸ್ ಮಾಜಿ ಶಾಸಕ ವಾಸು ನಿಧನ.

ಮೈಸೂರು,ಮಾರ್ಚ್,9,2024(www.justkannada.in): ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ವಾಸು(72) ನಿಧನರಾಗಿದ್ದಾರೆ.

ಮಾಜಿ ಶಾಸಕ ವಾಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.   ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಅವರು ನಿಧನರಾಗಿದ್ದಾರೆ.  ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಇವರು ಟಿಕೆಟ್ ವಂಚಿತರಾಗಿದ್ದರು.

ಮೈಸೂರು ಮೇಯರ್ ಆಗಿದ್ದ ವಾಸು ಅವರು ಬಳಿಕ ಶಾಸಕರಾದರು. ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮಾಲೀಕರಾಗಿದ್ದು ಇವರು ‘ಪ್ರಜಾನುಡಿ’ ಪತ್ರಿಕೆ ಮಾಲೀಕರಾಗಿದ್ದರು.

ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ ಸಂತಾಪ.

ವಾಸು ಅವರ ನಿಧನಕ್ಕೆ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವಾಸು ಅವರು ಬಹಳ ವರ್ಷಗಳ ಕಾಲ ಒಡನಾಡಿಯಾಗಿದ್ದರು. ಚಿರಪರಿಚಿತರಾಗಿದ್ದರು. ಅವರ ನಿಧನ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.

Key words: Former- Congress -MLA -Vasu -passed away-mysore