Friday, August 21, 2026

BDA Apartments

Home Front Page ಲೋಕಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆಯ ಪ್ರಶ್ನೆಯೇ ಇಲ್ಲ- ಸಚಿವ ಕೃಷ್ಣಭೈರೇಗೌಡ.

ಲೋಕಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆಯ ಪ್ರಶ್ನೆಯೇ ಇಲ್ಲ- ಸಚಿವ ಕೃಷ್ಣಭೈರೇಗೌಡ.

ಮಂಗಳೂರು,ಮಾರ್ಚ್,9,2024(www.justkannada.in): ಲೋಕಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆಯ ಪ್ರಶ್ನೆಯೇ ಇಲ್ಲ. ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಕೃಷಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಶೀಘ್ರದಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ. ಒಳ್ಳೆಯ ಅಭ್ಯರ್ಥಿಗಳನ್ನ ಆಯ್ಕೆ ಮಾಡಿ ಚುನಾವಣೆಗೆ ಇಳಿಸುಲು ಪ್ರಯತ್ನ ಮಾಡಲಾಗುತ್ತದೆ ಎಂದರು.

ಕೆಲವು ಕ್ಷೇತ್ರಗಳಿಂದ ಕೆಲವು ಸಚಿವರುಗಳು ಸ್ಪರ್ಧಿಸಿದರೆ ಲಾಭವಾಗತ್ತದೆ ಎಂಬ ಅಭಿಪ್ರಾಯ ಇದೆ. ಯಾರು ಸ್ಪರ್ಧೆ ಮಾಡಬೇಕು ಅನ್ನೋದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಸಂಪುಟದಲ್ಲಿರುವ ಸಚಿವರುಗಳು  ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ  ಎನ್ನುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರೂ‌ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.

ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಇಚ್ಛೆ ಇಲ್ಲ. ಈಗಾಗಲೇ ಪಕ್ಷದ ವರಿಷ್ಠರಿಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ವರಿಷ್ಠರೂ ಕೂಡ ನನ್ನ ಅಭಿಪ್ರಾಯಕ್ಕೆ ಗೌರವ ಕೊಟ್ಟಿದ್ದಾರೆ ಅಂತ ತಿಳಿದಿದ್ದೇನೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

Key words: no question – contesting -Lok Sabha -elections – Minister- Krishnabhaire Gowda.