Sunday, August 9, 2026

BDA Apartments

Home Front Page ಎರಡ್ಮೂರು ದಿನಗಳಲ್ಲಿ 2ನೇ ಪಟ್ಟಿ ಬಿಡುಗಡೆ: ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ-ಗೃಹ ಸಚಿವ...

ಎರಡ್ಮೂರು ದಿನಗಳಲ್ಲಿ 2ನೇ ಪಟ್ಟಿ ಬಿಡುಗಡೆ: ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ-ಗೃಹ ಸಚಿವ ಡಾ.ಜಿ.ಪರಮೇಶ್ವರ್.

ತುಮಕೂರು,ಮಾರ್ಚ್,16,2024(www.justkannada.in): ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಎರಡು ಮೂರು ದಿನಗಳಲ್ಲಿ ಬಿಡುಗಡೆಯಾಗಲಿದ್ದು, 20ಕ್ಕೂ ಹೆಚ್ಚಿನ ಸ್ಥಾನವನ್ನ ಗೆಲ್ಲುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್,  2ನೇ ಪಟ್ಟಿ ರಿಲೀಸ್ ಗೆ ಅಂತಿಮ ಚರ್ಚೆ ಮುಗಿದಿದೆ. ಅಂತಿನ ಸುತ್ತಿನ ಚರ್ಚೆಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಎರಡು ಮೂರು ದಿನಗಳಲ್ಲಿ 2ನೇ ಪಟ್ಟಿ ಬಿಡುಗಡೆಯಾಗಲಿದೆ . ನಮ್ಮ ಪಕ್ಷದ 21 ಅಭ್ಯರ್ಥಿಗಳನ್ನ ಘೋಷಿಸಬೇಕು ನಮ್ಮ ಗ್ಯಾರಂಟಿ ಯೋಜನೆ ಯಶಸ್ವಿಯಾಗಿದೆ. ಮಹಿಳೆಯರಿಗೆ ಅನುಕೂಲವಾದಂತಹ ಯೋಜನೆ ರೂಪಿಸಿದ್ದೇವೆ ಎಂದರು.

ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಾಜಿಪರಮೇಶ್ವರ್, ರಾಹುಲ್ ಗಾಂಧಿ ಪ್ರವಾಸದ ಪಟ್ಟಿ ಇನ್ನೂ ಬಿಡುಗಡೆ ಆಗಿಲ್ಲ. ಮಲ್ಲಿಕಾರ್ಜುನ ಖರ್ಗೆ ಕೂಡ ಬಂದು ಪ್ರಚಾರ ಮಾಡಲಿದ್ದಾರೆ. ಪ್ರವಾಸ ವೇಳಾಪಟ್ಟಿ ಬಂದ ಮೇಲೆ ಕೆಪಿಸಿಸಿ ಅಧ್ಯಕ್ಷರು ಪ್ರಕಟಿಸಲಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.

Key words: 2nd list- released – two to three days- Home Minister- Dr. G. Parameshwar