Wednesday, August 26, 2026

BDA Apartments

Home Front Page ನಾಳೆ  ಅಭ್ಯರ್ಥಿಗಳ ಪಟ್ಟಿ ಫೈನಲ್ –ಡಿಸಿಎಂ ಡಿ.ಕೆ ಶಿವಕುಮಾರ್.

ನಾಳೆ  ಅಭ್ಯರ್ಥಿಗಳ ಪಟ್ಟಿ ಫೈನಲ್ –ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಮಾರ್ಚ್,19,2024(www.justkannada.in): ನಾಳೆ ನಮ್ಮ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ.  ನನಗೆ ವಿಶ್ವಾಸ ಇದೆ. ಎರಡು ಮೂರು ಕ್ಷೇತ್ರ ಬಿಟ್ಟು ಎಲ್ಲಾ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದು ಇದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಇನ್ನು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರನ್ನ ಕಾಂಗ್ರೆಸ್ ಗೆ ಕರೆತರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಕರೆ ತಂದು ಟಿಕೆಟ್ ನೀಡಿದ್ವಿ. ಜೆಡಿಎಸ್ ನಿಂದ ಎಂ.ಪಿ ಕುಮಾರಸ್ವಾಮಿ, ಆಯನೂರು ಮಂಜುನಾಥ್ ಕತರೆ ತಂದವು. ರಾಜಕೀಯದಲ್ಲಿ ಇದು ಸರ್ವೇ ಸಾಮಾನ್ಯ ಎಂದರು.

ಸಿಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ನಮಗೆ ಮೊದಲಿಂದಲೂ ಗೊತ್ತಿರುವ ವಿಚಾರ.  ಬಿಜೆಪಿ ಸ್ಟೈಲೇ ಅದು. ಎಲ್ಲಾ ರಾಜ್ಯದಲ್ಲೂ ಹೀಗೆ ಮಾಡ್ತಾರೆ.  ಅವರ ಆಂತರಿಕ ವಿಚಾರದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದು ತಿಳಿಸಿದರು.

Key words: Final-list -candidates -tomorrow – DCM -DK Shivakumar.