Friday, November 6, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಗುಡ್ ನ್ಯೂಸ್: ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲೂ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ..

ಗುಡ್ ನ್ಯೂಸ್: ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲೂ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ..

ನವದೆಹಲಿ,ಸೆ,14,2019(www.justkannada.in): ಕನ್ನಡದಲ್ಲೂ ಬ್ಯಾಂಕಿಂಗ್‌ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಕನ್ನಡಪರ ಸಂಘಟನೆಗಳು ಹೋರಾಟ ನಡೆಸಿದ್ದಕ್ಕೆ ಫಲ ಸಿಕ್ಕಿದೆ. ಹೌದು ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ  ಅವಕಾಶ ಕಲ್ಪಿಸಿದೆ.

ಈ ಕುರಿತು  ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಬರೆಯಲು ಅವಕಾಶ  ಕಲ್ಪಿಸುವುದಾಗಿ ಹೇಳಿದ್ದಾರೆ, ಇಂಗ್ಲೀಷ್ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳು ನಡೆಯಲಿವೆ ಎಂದು  ಹೇಳಿದ್ದಾರೆ.

ಬ್ಯಾಂಕಿಂಗ್‌ ಪರೀಕ್ಷೆ ಬರೆಯಲು ಕನ್ನಡದಲ್ಲೂ ಅವಕಾಶ ಕಲ್ಪಿಸಬೇಕು ಎಂದು ಕನ್ನಡಪರ ಸಂಘಟನೆಗಳು ಹೋರಾಟ ನಡೆಸಿದ್ದವು. ಇದೀಗ ಕನ್ನಡಿಗರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

Key words: Kannada -regional Language- banking- exams- Permission