Wednesday, August 26, 2026

BDA Apartments

Home Front Page ಯಾರು ರಾಜ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜಾಣ್ಮೆಯ ಉತ್ತರ ನೀಡಿದ ಬಿಜೆಪಿ ಅಭ್ಯರ್ಥಿ ಯದುವೀರ್‌.

ಯಾರು ರಾಜ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜಾಣ್ಮೆಯ ಉತ್ತರ ನೀಡಿದ ಬಿಜೆಪಿ ಅಭ್ಯರ್ಥಿ ಯದುವೀರ್‌.

ಮೈಸೂರು,ಮಾರ್ಚ್,19,2024(www.justkannada.in): ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ವ್ಯಂಗ್ಯವಾಗಿ ಸಿಎಂ ಸಿದ್ದರಾಮಯ್ಯ ಯಾರು ರಾಜ..? ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಸ್ವತಃ ಪ್ರತಿಕ್ರಿಯಿಸಿರುವ ಯದುವೀರ್ ಅವರು ಜಾಣ್ಮೆಯ ಉತ್ತರ ನೀಡಿದ್ದಾರೆ.

ಹೌದು, ಸಿಎಂ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಆ ವಿಚಾರದ ಬಗ್ಗೆ ನಾನು ಹೇಗೆ ಪ್ರತಿಕ್ರಿಯೆ ಕೊಡಲಿ ಎಂದು ಯದುವೀರ್‌ ತಿಳಿಸಿದ್ದಾರೆ.

ಇಂದು ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಯದುವೀರ್ ಅವರು, ನಾನು ಈಗಾಗಲೇ ಹೇಳಿದ್ದೇನೆ, ಸಂವಿಧಾನದಲ್ಲಿ ರಾಜ ರಾಣಿ ಎಂಬ ಯಾವುದು ವಿಶೇಷ ಮಹತ್ವ ಇಲ್ಲ.  ಎಲ್ಲರೂ ಪ್ರಜೆಗಳೇ ಇಷ್ಟನ್ನು ಮಾತ್ರ ನಾನು ಹೇಳಬಲ್ಲೇ ಎಂದರು.

ಸುತ್ತೂರು ಸ್ವಾಮೀಜಿಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಬೇರೆ ಯಾವ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ. ನಮ್ಮ ಚುನಾವಣಾ ಪ್ರಚಾರ ಎಂದಿನಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ದಿನಾಂಕ ಇನ್ನೂ ಎರಡು ಮೂರು ದಿನಗಳಲ್ಲಿ ತೀರ್ಮಾನವಾಗುತ್ತದೆ‌. ಮೋದಿ ಪ್ರಚಾರಕ್ಕೆ ಬರುವ ಬಗ್ಗೆ ನನಗೆ ಇನ್ನೂ ಸದ್ಯಕ್ಕೆ ಮಾಹಿತಿ ಇಲ್ಲ ಎಂದರು.

Key words: BJP candidate -Yaduveer – reply – CM Siddaramaiah’s- statement -who is the king.