Thursday, August 13, 2026

BDA Apartments

Home Front Page ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನ:  ಕಾಂಗ್ರೆಸ್ ಸೇರ್ಪಡೆ ಕುರಿತು ಡಿ.ವಿ ಸದಾನಂದಗೌಡರ ಪ್ರತಿಕ್ರಿಯೆ ಹೀಗಿತ್ತು.

ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನ:  ಕಾಂಗ್ರೆಸ್ ಸೇರ್ಪಡೆ ಕುರಿತು ಡಿ.ವಿ ಸದಾನಂದಗೌಡರ ಪ್ರತಿಕ್ರಿಯೆ ಹೀಗಿತ್ತು.

ಬೆಂಗಳೂರು,ಮಾರ್ಚ್,21,2024(www.justkannada.in): ಲೋಕಸಭೆ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ವಿ ಸದಾನಂದಗೌಡರು, ನನರ ಟಿಕೆಟ್ ಸಿಗದಿದ್ದಕ್ಕೆ ತುಂಬಾ ನೋವಾಗಿದೆ. ನನ್ನ ನಡಿಗೆ ಕರ್ನಾಟಕದ ಬಿಜೆಪಿ ‍ಶುದ್ಧೀಕರಣದ ಕಡೆಗೆ. ಪಕ್ಷ ಶುದ್ಧೀಕರಣ ನನ್ನ ಉದ್ದೇಶ. ನನಗೆ ಅನ್ಯಾಯ ಮಾಡಿದವರು ಮುಂದಿನ ದಿನಗಳಲ್ಲಿ ಪಶ್ಚಾತಾಪ ಪಡುತ್ತಾರೆ ಎಂದಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಡಿ.ವಿ ಸದಾನಂದಗೌಡರು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ. ಕಾಂಗ್ರೆಸ್ ನಿಂದ ಆಫರ್ ಬಂದಿರುವುದು ನಿಜ. ಆದರೆ ನಾನು ಕಾಂಗ್ರೆಸ್ ಸೇರಲ್ಲ ಎಂದು ಸ್ಪಷ್ಟನೆ ನೀಡಿದರು.

Key words: Upset -BJP -ticket- DV Sadananda Gowda- reaction