Saturday, August 15, 2026

BDA Apartments

Home Front Page ಶಿವಮೊಗ್ಗದಲ್ಲಿ ಕಾಂಗ್ರೆಸ್ ನಿಂದ ಡಮ್ಮಿ ಕ್ಯಾಂಡಿಡೇಟ್- ಕೆ.ಎಸ್ ಈಶ್ವರಪ್ಪ

ಶಿವಮೊಗ್ಗದಲ್ಲಿ ಕಾಂಗ್ರೆಸ್ ನಿಂದ ಡಮ್ಮಿ ಕ್ಯಾಂಡಿಡೇಟ್- ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ,ಮಾರ್ಚ್,23,2024(www.justkannada.in): ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ್ದಕ್ಕೆ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನ ಪರೋಕ್ಷವಾಗಿ ಡಮ್ಮಿ ಕ್ಯಾಂಡಿಡೇಟ್ ಎಂದಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ,  ಶಿವಮೊಗ್ಗದಲ್ಲಿ ಕಾಂಗ್ರೆಸ್ ಡಮ್ಮಿ ಕ್ಯಾಂಡಿಡೇಟ್ ಹಾಕಿದೆ . ಡಮ್ಮಿ ಕ್ಯಾಂಡಿಡೇಟ್ ಹಾಕಿಸಿಕೊಂಡು ಬಂದಿದ್ದಾರೆ. ಹೀಗಂತ ನಾನು ಹೇಳ್ತಿಲ್ಲ. ಜನರು ಹೇಳ್ತಿದ್ದಾರೆ ಎನ್ನುವ ಮೂಲಕ ಗೀತಾ ಶಿವರಾಜ್ ಕುಮಾರ್ ಡಮ್ಮಿ ಕ್ಯಾಂಡಿಡೇಟ್ ಎಂದರು.

ಇನ್ನು ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಗಾಗಲೇ ನಿರ್ಧಾರ ಕೈಗೊಂಡಿರುವೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೂಡ ಮಾಡಿರುವೆ. ಎಲ್ಲಾ ಕಡೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಅದೃಶ್ಯದ ಮತಗಳೆಲ್ಲ ನನಗೆ ಖಂಡಿತ ಸಿಗುತ್ತವೆ. ವಿಶೇಷವಾಗಿ ಜೆಡಿಎಸ್, ಕಾಂಗ್ರೆಸ್, ರಾಷ್ಟ್ರಭಕ್ತ ಮುಸ್ಲಿಂರ ಮತಗಳು ಕೂಡ ನನಗೆ ಸಿಗುತ್ತವೆ. ನಾನು ಗೆದ್ದು ಮತ್ತೆ ಬಿಜೆಪಿಯಲ್ಲಿ ಗುರುತಿಸಿಕೊಂಡು ಮೋದಿಯವರು ಪ್ರಧಾನಿಯಾಗಲು ನೆರವಾಗುತ್ತೇನೆ ಎಂದರು.

Key words: Dummy candidate – Congress – Shimoga – KS Eshwarappa