Sunday, October 25, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Crime ಪರೀಕ್ಷೆ ಬರೆಯಬೇಕಿದ್ದ ಇಬ್ಬರು ಎಸ್ ಎಸ್ ಎಲ್ ಸಿ  ವಿದ್ಯಾರ್ಥಿಗಳು ಸಾವು

ಪರೀಕ್ಷೆ ಬರೆಯಬೇಕಿದ್ದ ಇಬ್ಬರು ಎಸ್ ಎಸ್ ಎಲ್ ಸಿ  ವಿದ್ಯಾರ್ಥಿಗಳು ಸಾವು

ಶಿವಮೊಗ್ಗ,ಮಾರ್ಚ್,25,2024(www.justkannada.in):  ಪರೀಕ್ಷೆ ಬರೆಯಬೇಕಿದ್ದ ಇಬ್ಬರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮ್ಮೆ ಕೂಲ್ಲುಂ(14) ಅಪಘಾತದಲ್ಲಿ ಮೃತಪಟ್ಟದ್ದಾಳೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದ ಅಪಘಾತದಲ್ಲಿ ಅವರು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.ಪರೀಕ್ಷೆ ಬರೆಯಬೇಕಿದ್ದ ಇಬ್ಬರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಸಾವು death death 1

ಪರೀಕ್ಷೆಗೆ ಹಾಜರಾಗಲು ಗ್ರಾಮದಿಂದ ಶಿವಮೊಗ್ಗಕ್ಕೆ ತೆರಳಲು ಬಸ್ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ ಚನ್ನಗಿರಿ ಕಡೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಇನೋವಾ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲೇ  ವಿದ್ಯಾರ್ಥಿನಿ ಉಮ್ಮೆ ಕೂಲ್ಲುಂ  ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ಪರಶುರಾಮ್ (17)   ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪರಶುರಾಮ್ (17) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮನೆಯ ಹಿಂಭಾಗ ಈತ ಆತ್ಮಹತ್ಯೆ ಮಾಡಿಕೊಂಡಿದ್ದು, ಪರೀಕ್ಷೆ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆನ್ನಲಾಗಿದೆ.

Key words: Two –SSLC- students – exam -died