Thursday, July 30, 2026

BDA Apartments

Home Front Page ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆಶೀರ್ವಾದ ನಮಗೆ ಆನೆ ಬಲ  ತಂದಿದೆ- ಬಿವೈ ವಿಜಯೇಂದ್ರ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆಶೀರ್ವಾದ ನಮಗೆ ಆನೆ ಬಲ  ತಂದಿದೆ- ಬಿವೈ ವಿಜಯೇಂದ್ರ

ಬೆಂಗಳೂರು, ಮಾರ್ಚ್​ 29 ,2024 (www.justkannada.in):  ಬೆಂಗಳೂರಿನ ಖಾಸಗಿ ಹೋಟೆಲ್ ​​ನಲ್ಲಿ ಬಿಜೆಪಿ-ಜೆಡಿಎಸ್​​ ಸಮನ್ವಯ ಸಮಿತಿ ಸಭೆ ನಡೆದಿದ್ದು ಬಳಿಕ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆಶೀರ್ವಾದ ನಮಗೆ ಆನೆ ಬಲ  ತಂದಿದೆ ಎಂದಿದ್ದಾರೆ.

ಸಭೆ ಬಳಿಕ ಮಾತನಾಡಿದ ಬಿವೈ ವಿಜಯೇಂದ್ರ, ರಾಜದಲ್ಲಿ ಹಲವು ಹೊಂದಾಣಿಕೆ ರಾಜಕಾರಣ ನಡೆದಿದೆ. ಮೈತ್ರಿಯನ್ನು ರಾಜ್ಯದ ಜನ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಇನ್ನೂ ಕೂಡಾ ಸಮನ್ವಯತೆ ಮೂಡಿಸುವ ಕೆಲಸ ಮಾಡಬೇಕಾಗಿದೆ. ಈ ಸಭೆ ಬಹಳ ಹಿಂದೆಯೇ ಆಗಬೇಕಾಗಿತ್ತು. ಈ ಸಮ್ಮಿಲನ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಆಗಲಿದೆ. ಹಿಂದೆಯೂ ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ಹೊಂದಾಣಿಕೆ ಆಗಿತ್ತು. ಆದರೆ ಸೈದ್ದಾಂತಿಕ ನೆಲೆಗಟ್ಟಿನಲ್ಲಿ ಅಂದಿನ ಕಾಲಘಟ್ಟದಲ್ಲಿ ದೇವೇಗೌಡರ ಸಮ್ಮತಿ‌ ಇರಲಿಲ್ಲ ಎಂಬುದೂ ಗೊತ್ತಿರುವ ವಿಚಾರ ಎಂದರು.

ಇನ್ನು ಆರೋಗ್ಯ ಸಮಸ್ಯೆಯನ್ನು ಕಡೆಗಣಿಸಿ ಕುಮಾರಸ್ವಾಮಿ ಪ್ರವಾಸ ಕೈಗೊಂಡು ಬದ್ಧತೆ ತೋರಿಸಿದ್ದಾರೆ. ಸಿಎಂ ಕನಿಷ್ಠ 15-20 ಮಂತ್ರಿಗಳನ್ನು ಸ್ಫರ್ಧೆ ಮಾಡಿಸಬೇಕು ಎಂದುಕೊಂಡಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿ ಎಷ್ಟು ಗಟ್ಟಿಯಾಗಿದೆ ಅಂದರೆ, ಕಾಂಗ್ರೆಸ್ ಪಕ್ಷದ ಯಾವುದೇ ಮಂತ್ರಿ ಸ್ಪರ್ಧಿಸುವ ಎದೆಗಾರಿಕೆ ತೋರಿಸಲು ಸಾಧ್ಯವಾಗಿಲ್ಲ ಎಂದು  ಬಿವೈ ವಿಜಯೇಂದ್ರ ಲೇವಡಿ ಮಾಡಿದರು.

Key words: HD DeveGowda, blessings, BY Vijayendra