Thursday, August 6, 2026

BDA Apartments

Home Front Page ಸುಮಲತಾ ಅಂಬರೀಶ್ ಸ್ವಾಭಿಮಾನದ ನಿರ್ಧಾರ ತೆಗೆದುಕೊಳ್ಳಲಿ- ಸಚಿವ ಚಲುವರಾಯಸ್ವಾಮಿ.

ಸುಮಲತಾ ಅಂಬರೀಶ್ ಸ್ವಾಭಿಮಾನದ ನಿರ್ಧಾರ ತೆಗೆದುಕೊಳ್ಳಲಿ- ಸಚಿವ ಚಲುವರಾಯಸ್ವಾಮಿ.

ಮಂಡ್ಯ,ಏಪ್ರಿಲ್, 1, 2024 (www.justkannada.in):  ಮಂಡ್ಯ ಲೋಕಸಭಾ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟು ಕೊಟ್ಟಿರುವ ಹಿನ್ನೆಲೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಈ ಹಿನ್ನೆಲೆಯಲ್ಲಿ ತಮ್ಮ ಮುಂದಿನ ನಿರ್ಧಾರವನ್ನ ಏಪ್ರಿಲ್ 3 ರಂದು ಮಂಡ್ಯದಲ್ಲಿ ಪ್ರಕಟಿಸುವುದಾಗಿ ಸುಮಲತಾ ಅಂಬರೀಶ್ ತಿಳಿಸಿದ್ದು ಈ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಸುಮಲತಾ ಅಂಬರೀಶ್ ಸ್ವಾಭಿಮಾನದ ನಿರ್ಧಾರ ತೆಗೆದುಕೊಳ್ಳಲಿ. ಸುಮಲತಾ ಅಂಬರೀಶ್ ಕಾಂಗ್ರೆಸ್ ಗೆ ಬೆಂಬಲ ಘೋಷಿಸಬೇಕು.  ಇಲ್ಲ  ಅವರು ತಟಸ್ಥವಾಗಿ ಇರಬೇಕು ಎಂದು ಹೇಳಿದ್ದಾರೆ.

ಮಂಡ್ಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಶ್ ಗೆ ಮೈತ್ರಿಯಿಂದಾಗಿ ಟಿಕೆಟ್ ಕೈತಪ್ಪಿದ್ದು ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸುಮಲತಾ ಅವರನ್ನ ಭೇಟಿಯಾಗಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಬೆಂಬಲಿಸುವಂತೆ ಮನವಿ ಮಾಡಿದ್ದರು.

ನಿನ್ನೆ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರು ಸಹ ಸಂಸದೆ ಸುಮಲತಾ ಅಂಬರೀಶ್ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿ ಬೆಂಬಲ ಕೋರಿದ್ದರು.

Key words: Sumalatha Ambarish, Minister, Chaluvarayaswamy.