Monday, September 21, 2026

BDA Apartments

ಸುಮಲತಾ ಅಂಬರೀಶ್ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಿದ್ದಾರೆ- ಮಾಜಿ ಸಿಎಂ ಹೆಚ್....
Home Front Page ಸುಮಲತಾ ಅಂಬರೀಶ್ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಿದ್ದಾರೆ- ಮಾಜಿ ಸಿಎಂ ಹೆಚ್.ಡಿಕೆ ವಿಶ್ವಾಸ.

ಸುಮಲತಾ ಅಂಬರೀಶ್ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಿದ್ದಾರೆ- ಮಾಜಿ ಸಿಎಂ ಹೆಚ್.ಡಿಕೆ ವಿಶ್ವಾಸ.

ಬೆಂಗಳೂರು,ಏಪ್ರಿಲ್,3,2024(www.justkannada.in): ಮೈತ್ರಿಯಿಂದಾಗಿ ಮಂಡ್ಯ ಲೋಕಸಭಾ ಕ್ಷೇತ್ರವನ್ನ ಜೆಡಿಎಸ್ ಗೆ ಬಿಜೆಪಿ ಬಿಟ್ಟುಕೊಟ್ಟಿದ್ದು ಇದರಿಂದಾಗಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಸಂಸದೆ ಸುಮಲತಾ ಅಂಬರೀಶ್ ಇಂದು ಬೆಂಬಲಿಗರು ಅಭಿಮಾನಿಗಳ ಜೊತೆ ಸಭೆ ನಡೆಸಿ  ತಮ್ಮ ಮುಂದಿನ ನಡೆ ಬಗ್ಗೆ ಘೋಷಣೆ ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ಮಂಡ್ಯ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಂಡ್ಯ ನೆಲದಲ್ಲಿ ಸುಮಲತಾ ನಿರ್ಧಾರ ತಿಳಿಸಲಿದ್ದಾರೆ. ಅವರು ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅವರ ಹಿತೈಷಿಗಳ ಸಮ್ಮುಖದಲ್ಲಿ ನಿರ್ಧಾರ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸುಮಲತಾ ಅಂಬರೀಶ್ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಿದ್ದಾರೆ hdk

ಇಂದು ಸಂಸದೆ ಸುಮಲತಾ ಅಂಬರೀಶ್ ಬೆಂಗಲಿಗರು ಅಭಿಮಾನಿಗಳ ಜೊತೆ ಸಭೆ ನಡೆಸಿ ಮೈತ್ರಿ ಅಭ್ಯರ್ಥಿಗೆ ಬೆಂಬಲಿಸಬೇಕೋ, ಪಕ್ಷೇತರವಾಗಿ ಸ್ಪರ್ಧಿಸಬೇಕೋ ಅಥವಾ ತಟಸ್ಥವಾಗಿರಬೇಕೋ ಎಂಬುದನ್ನ ನಿರ್ಧಾರ ಮಾಡಲಿದ್ದಾರೆ.

Key words: SumalataAmbarish, decision, HDK