Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದ ಸಂಸದೆ ಸುಮಲತಾ ಅಂಬರೀಶ್.

ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದ ಸಂಸದೆ ಸುಮಲತಾ ಅಂಬರೀಶ್.

ಮಂಡ್ಯ,ಏಪ್ರಿಲ್, 3, 2024(www.justkannada.in):  ಭಾರಿ ಕುತೂಹಲಕ್ಕೆ ಕಾರಣವಾಗಿರುವ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ತಮ್ಮ ಬೆಂಬಲವನ್ನ ಘೋಷಿಸಿದ್ದಾರೆ.

ಇಂದು ಮಂಡ್ಯದ ಕಾಳಿಕಾಂಬ ದೇಗುಲದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿ ಸಂಸದೆ ಸುಮಲತಾ ಅಂಬರೀಶ್ ಅವರು ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ. ಬೆಂಬಲಿಗರ ಜೊತೆ ಇರುತ್ತೇನೆ.  ಮೈತ್ರಿ ಅಭ್ಯರ್ಥಿಗೆ  ಬೆಂಬಲಿಸುವುದಾಗಿ ತಿಳಿಸಿದ್ದಾರೆ.ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದ ಸಂಸದೆ ಸ...

ಈ ಬಾರಿಯ ಚುನಾವಣೆಯೂ ಒಂದು ದೊಡ್ಡ ಸವಾಲು.  2019ರಲ್ಲಿ ಅದೊಂದು ಬೇರೆ ತರಹ ಇತ್ತು.  ಈಗ ಬದಲಾದ ಪರಿಸ್ಥಿತಿಯಲ್ಲಿ ಮತ್ತೊಂದು ಸವಾಲು ಎದುರಾಗಿದೆ. ನನಗೆ ಬೇರೆ ಕ್ಷೇತ್ರದ ಆಫರ್ ನೀಡಿದ್ರು.  ಮೈಸೂರು ಕ್ಷೇತ್ರದಿಂದ ನಿಲ್ತೀರಾ ಅಂದ್ರು. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದೆ ಅಧಿಕಾರಕ್ಕೆ ಅಂಟಿಕೊಂಡು ಕೂರುವ ಆಸೆ ನನಗಿಲ್ಲ. ಬದಲಾದ ಪರಿಸ್ಥಿತಿ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು.  ಎಲ್ಲರಂತೆ ಆಗಿದ್ರೆ ಎಲ್ಲೋ ಒಂದು ಕಡೆ ಸ್ಪರ್ಧಿಸುತ್ತಿದ್ದೆ,ನಾನು ಯಾವತ್ತೂ ಮಂಡ್ಯವನ್ನು ಬಿಟ್ಟು ಹೋಗಲು ಇಷ್ಟವಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದರು. ಈ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದ ಕಣದಿಂದ ಸುಮಲತಾ ಅಂಬರೀಶ್ ಹಿಂದೆ ಸರಿದಿದ್ದಾರೆ.

Key words: Sumalatha Ambarish, support, Mandya, HD Kumaraswamy.