Friday, August 21, 2026

BDA Apartments

Home Front Page ವಯನಾಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ.

ವಯನಾಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ.

ವಯನಾಡು,ಏಪ್ರಿಲ್,3, 2024 (www.justkannada.in): ಲೋಕಸಭೆ ಚುನಾವಣೆಗೆ ಕೇರಳಾದ ವಯನಾಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.

ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ ರಾಹುಲ್ ಗಾಂಧಿ   ಇದಾದ ಬಳಿಕ ವಯನಾಡ್ ಲೋಕಸಭಾ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಹೆಲಿಕಾಪ್ಟರ್ ಮೂಲಕ ಮುಪ್ಪೈನಾಡ್ ಗ್ರಾಮಕ್ಕೆ ಆಗಮಿಸಿದ್ದು, ರಸ್ತೆ ಮೂಲಕ ಕಲ್ಪೆಟ್ಟಾವರೆಗೆ ಪ್ರಯಾಣಿಸಿದರು. ನಂತರ ಅವರು ಕಲ್ಪೆಟ್ಟಾದಿಂದ ರೋಡ್ ಶೋ ನಡೆಸಿ ನಂತರ ನಾಮಪತ್ರ ಸಲ್ಲಿಕೆ ಮಾಡಿದರು.

ರಾಹುಲ್ ಗಾಂಧಿ ಅವರಿಗೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ದೀಪಾ ದಾಸ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

Key words: Rahul Gandhi, nomination, Congress candidate