Saturday, August 22, 2026

BDA Apartments

Home Front Page ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ.

ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ.

ಮಂಡ್ಯ, ಏಪ್ರಿಲ್, 4, 2024 (www.justkannada.in): ಮಂಡ್ಯ ಲೋಕಸಭಾ ಕ್ಷೇತ್ರದ  ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.

ಮಂಡ್ಯ ಜಿ‍ಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಡಾ. ಕುಮಾರ್ ಅವರಿಗೆ ಹೆಚ್.ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಸುವ ಮೊದಲು ಕುಮಾರಸ್ವಾಮಿ, ನಗರಕ್ಕೆ ಹತ್ತಿರದ ಗುತ್ತಲುನಲ್ಲಿರುವ ಅರ್ಕೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ , ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಮೊದಲಾದವರು  ಉಪಸ್ಥಿತರಿದ್ದರು.

Key words: HD Kumaraswamy, nomination, Mandya