Saturday, September 26, 2026

BDA Apartments

ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ BDA JK_Adv BDA Adv
Home Front Page ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ.

ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ.

ಬೆಂಗಳೂರು, ಏಪ್ರಿಲ್,5,2024 (www.justkannada.in): ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರಿದರು. ಬಿಎಸ್ ವೈ ಅವರು ಪಕ್ಷದ ಬಾವುಟ ನೀಡಿ ಬಿಜೆಪಿ ಶಾಲು ಹಾಕಿ ಬಿಜೆಪಿಗೆ ಬರಮಾಡಿಕೊಂಡರು.

ಈ ವೇಳೆ ಮಂಡ್ಯ ಕ್ಷೇತ್ರದ ಬೆಂಬಲಿಗರು ಸಹ ಬಿಜೆಪಿ ಸೇರಿದ್ದು ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಸೇರಿ ಹಲವರು ಉಪಸ್ಥಿತರಿದ್ದರು.ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ sumalatha1

ಕಳೆದ ಎರಡು ದಿನಗಳ ಹಿಂದೆ ಸಂಸದೆ ಸುಮಲತಾ ಅಂಬರೀಶ್ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಿಜೆಪಿ ಸೇರಿ ಮೈತ್ರಿ ಅಭ್ಯರ್ಥಿ ಬೆಂಬಲಿಸುವುದಾಗಿ ಘೋಷಿಸಿದ್ದರು.

Key words: Sumalatha Ambarish, joins, BJP