Thursday, September 17, 2026

BDA Apartments

ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ: ಅಗ್ನಿಶಾಮಕ ಸಿಬ್ಬಂದಿ, ಪೊಲೀ...
Home Crime ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ: ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡು.

ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ: ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡು.

ಬೆಂಗಳೂರು, ಏಪ್ರಿಲ್, 5, 2024 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಆರ್.ಟಿ.ನಗರ ಪೊಲೀಸರ ದೌಡಾಯಿಸಿದ್ದಾರೆ.

ಪಕ್ಕದ ಮನೆಯ ಕಟ್ಟಡಕ್ಕೆ ಏಣಿ ಇಟ್ಟು ಕಟ್ಟಡದಲ್ಲಿದ್ದವರ ರಕ್ಷಣಾ ಕಾರ್ಯಚರಣೆ ನಡೆಸುತ್ತಿದ್ದಾರೆ. ಕಟ್ಟಡದ ನೆಲಮಹಡಿಯಲ್ಲಿದ್ದ ಡಿಜಿ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ rt nagar

ಏಣಿ ಮೂಲಕ ಪಕ್ಕದ ಕಟ್ಟಡಕ್ಕೆ ಸಿಬ್ಬಂದಿಯನ್ನು ಸ್ಥಳಾಂತರಿಸಿದ್ದಾರೆ. ಸದ್ಯ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. ಕೆಲವರಿಗೆ ಬೆಂಕಿಯ ಹೊಗೆಯಿಂದ ಉಸಿರಾಟದ ಸಮಸ್ಯೆಯಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Fire, Miracle Drinks, bangalore