Monday, October 26, 2026

Dasara Wishes

ಇಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ DasraWishes_JK DasraWishes JK
Happy Dasara
Home Front Page ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಸಾವು.

ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಸಾವು.

ಮೈಸೂರು, ಏಪ್ರಿಲ್, 10, 2024 (www.justkannada.in): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ಶಿಬಿರದಲ್ಲಿಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ.

ವಿರಾಟ್ ಎಂಬ ಸಾಕಾನೆ ಅನಾರೋಗ್ಯದಿಂದ ಸಾವನ್ನಪ್ಪಿದೆ. ವೀರನಹೊಸಹಳ್ಳಿ ವನ್ಯಜೀವಿ ವಲಯದಿಂದ ದಿನಾಂಕ 04-11-2023 ರಂದು ಸೆರೆ ಹಿಡಿಯಲಾಗಿತ್ತು. ತುಂಬಾ ದಿನಗಳಿಂದ ತೀವ್ರ ಅನಾರೋಗ್ಯದಿಂದ ವಿರಾಟ್ ಆನೆ ಬಳಲುತ್ತಿತ್ತು. ಈ ಮಧ್ಯೆ ಆನೆಗೆ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಆನೆ ಸಾವನ್ನಪ್ಪಿದೆ.ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಸಾವು elephant

ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನಂತರ ಸಾಕಾನೆಯನ್ನು ಹೂಳುವ ಮುಖಾಂತರ ಶವ ಸಂಸ್ಕಾರ ನೆರವೇರಿಸಲಾಯಿತು.

Key words: mysore, sick, elephant, dies