Monday, October 26, 2026

Dasara Wishes

Happy Dasara
Home Front Page ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್.

ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್.

ಚಿತ್ರದುರ್ಗ, ಏಪ್ರಿಲ್ 15,2024 (www.justkannada.in): ಲೋಕಸಭಾ ಚುನಾವಣೆ ಪ್ರಚಾರಕ್ಕೆಂದು ಚಿತ್ರದುರ್ಗಕ್ಕೆ  ತೆರಳುತ್ತಿದ್ದ ವೇಳೆ ಸಚಿವ ಜಮೀರ್ ಅಹಮ್ಮದ್​ ಖಾನ್​ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ನಡೆಸುತ್ತಿದ್ದ ಜಮೀರ್ ಅಹಮ್ಮದ್ ಖಾನ್ ಅವರು ಇಂದು ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ  ಸಚಿವ ಜಮೀರ್ ಗೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ  ಜಮೀರ್ ಅಹಮ್ಮದ್ ಖಾನ್ ಅವರನ್ನು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು, ಡಿಸ್ಚಾರ್...

ವೈದ್ಯರು ಜಮೀರ್ ಅಹಮ್ಮದ್ ಖಾನ್ ಅವರ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ  ನೀಡಿದ್ದು ಅದೃಷ್ಟವಶಾತ್ ಅಂತಹ ಗಂಭೀರವಾಗಿ ಏನು ಆಗಿಲ್ಲ ಎಂದು ತಿಳಿದುಬಂದಿದೆ. ಎಲ್ಲಾ ಪರೀಕ್ಷೆಯಲ್ಲಿ ನಾಮರ್ಲ್​ ಎಂದು ಬಂದಿದೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Key words: Minister, Jameer Ahmed, Chest pain, treatment