Wednesday, August 12, 2026

BDA Apartments

Home Front Page ಹಿರಿಯ ನಟ ದ್ವಾರಕೀಶ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ.

ಹಿರಿಯ ನಟ ದ್ವಾರಕೀಶ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು,ಏಪ್ರಿಲ್,17,2024 (www.justkannada.in): ನಿನ್ನೆ ಹೃದಯಾಘಾತದಿಂದ ನಿಧನರಾದ ಕನ್ನಡ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿದೆ.

ಇಂದು ರವೀಂದ್ರ ಕಲಾಕ್ಷೇತ್ರಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಹಿರಿಯ ನಟ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ಬಳಿಕ ದ್ವಾರಕೀಶ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.

ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಿತ್ರರಂಗಕ್ಕೆ ದ್ವಾರಕೀಶ್ ನೀಡಿರುವ ಸೇವೆ ಮರೆಯಲು ಆಗಲ್ಲ. ದ್ವಾರಕೀಶ್ ಹಲವು ದಿಗ್ಗಜರೊಂದಿಗೆ ಕೆಲಸ ಮಾಡಿದ್ದಾರೆ.  ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

Key words: CM, Siddaramaiah, veteran actor, Dwarkeesh