Saturday, September 19, 2026

BDA Apartments

ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ: ‘ಕೈ’ ಕಾರ್ಯಕರ್ತರು ಪೊಲೀಸರ ವಶಕ್ಕೆ ...
Home Front Page ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ: ‘ಕೈ’ ಕಾರ್ಯಕರ್ತರು ಪೊಲೀಸರ ವಶಕ್ಕೆ

ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ: ‘ಕೈ’ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು,ಏಪ್ರಿಲ್,20,2024 (www.justkannada.in): ಇಂದು ರಾಜ್ಯಕ್ಕೆ  ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ, ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿರುವ ಹೊತ್ತಲ್ಲೇ ಮೋದಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ chombu

ಬೆಂಗಳೂರಿನ ಮೇಖ್ರಿ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು. ಪ್ರಧಾನಿ ಮೋದಿ ವಿರುದ್ಧ ಹಾಗೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

Key words: Congress, protest, against, Modi