Sunday, September 27, 2026

BDA Apartments

ಏ.28ಕ್ಕೆ ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ: ಎರಡು ದಿನ ಕ್ಯಾಂಪೇನ್ BDA JK_Adv BDA Adv
Home Election 2024 ಏ.28ಕ್ಕೆ ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ: ಎರಡು ದಿನ ಕ್ಯಾಂಪೇನ್.

ಏ.28ಕ್ಕೆ ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ: ಎರಡು ದಿನ ಕ್ಯಾಂಪೇನ್.

ಬೆಳಗಾವಿ,ಏಪ್ರಿಲ್,23,2024 (www.justkannada.in): ಲೋಕಸಭೆ ಚುನಾವಣೆ ಹಿನ್ನೆಲೆ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಏಪ್ರಿಲ್ 28 ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಏಪ್ರಿಲ್ 28 ಮತ್ತು 29 ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಭಾಗಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಏಪ್ರಿಲ್ 28ರಂದು  ಬೆಳಗಾವಿ, ದಾವಣಗೆರೆಯಲ್ಲಿ ಉತ್ತರ ಕನ್ನಡದಲ್ಲಿ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ ಏಪ್ರಿಲ್ 29 ರಂದು ಕಲಬುರುಗಿ, ಬಳ್ಳಾರಿ, ರಾಯಚೂರಿನಲ್ಲಿ ಕ್ಯಾಂಪೇನ್ ಮಾಡಲಿದ್ದಾರೆ. ವಾರದ ಹಿಂದೆ ಮೈಸೂರಿನಲ್ಲಿ ಸಮಾವೇಶದಲ್ಲಿ ಪಾಲ್ಗೊಂಡು, ಮಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದ ಪ್ರಧಾನಿ ಮೋದಿ ಕಳೆದ ಶನಿವಾರ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ್ದರು.ಏ.28ಕ್ಕೆ ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ moi

ರಾಜ್ಯದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆದರೇ ಮೇ 7 ರಂದು ಉಳಿದ 14 ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದೆ.

Key words:  pm Modi, state, April 28, campaign.