Monday, August 3, 2026

BDA Apartments

Home Crime ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕೆಎಸ್ ಆರ್ ಟಿಸಿ ಬಸ್: ಇಬ್ಬರು ದುರ್ಮರಣ.

ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕೆಎಸ್ ಆರ್ ಟಿಸಿ ಬಸ್: ಇಬ್ಬರು ದುರ್ಮರಣ.

ಹಾಸನ,ಏಪ್ರಿಲ್,23,2024 (www.justkannada.in): ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದಿದ್ದು,  ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಬೈಕ್ ​ಗೆ ಹಿಂಬದಿಯಿಂದ ಬಂದ  ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಪರಿಣಾಮ  ರಸ್ತೆಯಲ್ಲಿಯೇ ಕೆ‌ಎಸ್‌ಆರ್‌ಟಿಸಿ ಬಸ್ ಹೊತ್ತಿ ಉರಿದಿದೆ.

ಕೂಡಲೇ ಚಾಲಕ ರಸ್ತೆಯಲ್ಲೇ ಬಸ್ ನಿಲ್ಲಿಸಿದ್ದು, ಬಸ್‌ ನಿಂದ ಕೆಳಗಿಳಿದು ಪ್ರಯಾಣಿಕರು ಓಡಿದ್ದಾರೆ. ನಂತರ ಸಂಪೂರ್ಣ ಬಸ್ ಹೊತ್ತಿಉರಿದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: KSRTC, bus, collision, bike