Wednesday, August 12, 2026

BDA Apartments

Home Crime ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ.

ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ.

ಬೆಂಗಳೂರು, ಏಪ್ರಿಲ್ ,25,2024 (www.justkannada.in):  ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ  ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಶಶಿಕುಮಾರ್(23), ಲೋಕಿ(23) ಮೃತಪಟ್ಟವರು. ಮತ್ತೊಬ್ಬನ ಗುರಿತು ಪತ್ತೆಯಾಗಿಲ್ಲ.  ಇನ್ನು ಮೃತಪಟ್ಟವರು ಅಂಧ್ರಪ್ರದೇಶದ ಚಿತ್ತೂರು ಮೂಲದವರು ಎನ್ನಲಾಗಿದೆ.

ಇಂದು ಸಾರ್ವಜನಿಕರು ನೋಡಿ ಕೂಡಲೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಹಳಿ ದಾಟುವಾಗ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.

Key words: Three youths, died, train, bangalore