Thursday, August 13, 2026

BDA Apartments

Home Front Page ಪ್ರಜ್ವಲ್ ರೇವಣ್ಣ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಪ್ರಜ್ವಲ್ ರೇವಣ್ಣ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಏಪ್ರಿಲ್,29,2024 (www.justkannada.in):  ಹಾಸನ ಜೆಡಿಎಸ್ ಅಭ್ಯರ್ಥಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ  ವಿರುದ್ದ ನಿರ್ದಾಕ್ಷಿಣ್ಯ ಕ್ರಮ  ಕೈಗೊಳ್ಳುವುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಸರ್ಕಾರ ಎಸ್ ಐಟಿ ರಚನೆ ಮಾಡಿದೆ  ಯಾರೇ ತಪ್ಪು ಮಾಡಿದರೂ ಶಿಕ್ಷೆ ಅನುಭವಿಸಬೇಕು.  ಎಸ್ ಐಟಿ ತನಿಖೆ ಮೂಲಕ ಸತ್ಯಾಂಶ ಹೊರಬರಲಿ. ಈ ಪ್ರಕರಣದಲ್ಲಿ ಯಾಕೆ ಕುಟುಂಬ ತರುತ್ತೀರಿ. ದೇವೇಗೌಡರು ನನ್ನ ಹೆಸರನ್ನ ಸೇರಿಸಬೇಡಿ. ಹೆಚ್.ಡಿ ದೇವೇಗೌಡರು ನಾನು ಮಹಿಳೆಯರಿಗೆ ಗೌರವ ಕೊಡುತ್ತೇವೆ ಎಂದರು.

ಪ್ರಜ್ವಲ್ ರೇವಣ್ಣ ವಿಚಾರ ಈಗ ತಿಳಿದಿದೆ. ಮೊದಲೇ ತಿಳಿದಿದ್ದರೇ ಕ್ರಮ ಕೈಗೊಳ್ಳುತ್ತಿದ್ದವು. ಅಶ್ಲೀಲ ವಿಡೀಯೋ ಕುಟುಂಬಕ್ಕೆ ಮಾತ್ರವಲ್ಲ ಇಡೀ ಸಮಾಜಕ್ಕೆ ಮುಜುಗರ ಎಂದು ಹೆಚ್.ಡಿ ಕುಮಾರಸ್ವಾಮಿ  ತಿಳಿಸಿದ್ದಾರೆ.

Key words: action, against, Prajwal Revanna, HDK