Wednesday, September 30, 2026

BDA Apartments

ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು BDA JK_Adv BDA...
Home Front Page ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು.

ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು.

ಬೆಂಗಳೂರು, ಏಪ್ರಿಲ್ 29,2024 (www.justkannada.in ) : ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಎಸ್.ಎಂ ಕೃಷ್ಣ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಎಸ್‌ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು smk

ಇತ್ತೀಚೆಗೆ ಎಸ್​. ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್  ಆಗಿದ್ದರು. ಇದೀಗ ಇಂದು ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

Key words: Former CM, SM Krishna, admitted, hospital