Thursday, November 5, 2026

Dasara Wishes

Happy Dasara
Home Front Page ಮೇ 8 ರಂದು ನೇರ ಸಂದರ್ಶನ : ಮೊಬೈಲ್‌ ರಿಪೇರಿ & ಸೇವೆ ಉಚಿತ ತರಬೇತಿಗೆ

ಮೇ 8 ರಂದು ನೇರ ಸಂದರ್ಶನ : ಮೊಬೈಲ್‌ ರಿಪೇರಿ & ಸೇವೆ ಉಚಿತ ತರಬೇತಿಗೆ

Bangalore, mobile, repair, training, course, rudest, jobs

 

ಬೆಂಗಳೂರು, ಏ.30, 2024 : (www.justkannada.in news )  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗೆ ಮೇ 8 ರಂದು ನೇರ ಸಂದರ್ಶನ ನಡೆಯಲಿದೆ.

ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

 

ಮೇ 15 ರಿಂದ ಎಂಬ್ರಾಯ್ಡರಿ & ಆರಿ ವರ್ಕ್  ಉಚಿತ ತರಬೇತಿ ಆರಂಭ

 

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ  ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585  ಸಂಪರ್ಕಿಸಬಹುದು.

Key words: Bangalore, mobile, repair, training, course, rudest, jobs