Saturday, August 15, 2026

BDA Apartments

Home Crime ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಹೆಚ್.ಡಿ ರೇವಣ್ಣ.

ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಹೆಚ್.ಡಿ ರೇವಣ್ಣ.

ಬೆಂಗಳೂರು,ಮೇ,2,2024 (www.justkannada.in): ಲೈಂಗಿಕ ದೌರ್ಜನ ಆರೋಪದ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಹೊಳೇನರಸಿಪುರ ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಇದೀಗ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಶಾಸಕ ಹೆಚ್.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್  ಗೆ ಎಸ್ ಐಟಿ ನೋಟಿಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿರುವ ಹೆಚ್.ಡಿ ರೇವಣ್ಣ ಇದೀಗ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣಗೆ ಎಸ್ ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ.

Key words: HD Revanna, applied, anticipatory bail