Friday, August 14, 2026

BDA Apartments

Home Election 2024 ನೇಹಾ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿ- ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹ.

ನೇಹಾ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿ- ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹ.

ಬೆಳಗಾವಿ ,ಮೇ,3,2024 (www.justkannada.in): ಹುಬ್ಬಳ್ಳಿಯ ಬಿವಿ ಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ  ಕೇಂದ್ರ ಗೃಹ ಸಚಿವ ಅಮಿತ್ ಶಾ, ವೈಯಕ್ತಿಕ ವಿಚಾರಕ್ಕೆ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿಲ್ಲ.  ಮತಾಂತರ ಆಗಲು ನೇಹಾ ಹಿರೇಮಠ ಒಪ್ಪದಿದ್ದಕ್ಕೆ ಹತ್ಯೆಯಾಗಿದೆ ಎಂದು ಆರೋಪಿಸಿದರು.

ನೇಹಾ ಕೊಲೆಗೆ ನ್ಯಾಯ ಸಿಗಬೇಕು ಅಂದರೆ ಪ್ರಕರಣವನ್ನು ಸಿಬಿಐಗೆ ವಹಿಸಲಿ.  ಅನ್ಯಾಯ ಮಾಡಿದವರಿಗೆ ತಲೆಕೆಳಗೆ ಮಾಡಿ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

Key words:  Amit Shah, Neha, murder, case, CBI