Saturday, August 1, 2026

BDA Apartments

Home Front Page ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ-ಕಲ್ಬುರ್ಗಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ…

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ-ಕಲ್ಬುರ್ಗಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ…

ಕಲ್ಬುರ್ಗಿ,ಸೆ,17,2019(www.justkannada.in):  ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು.

ಇಂದು ಕಲ್ಬುರ್ಗಿಗೆ ಆಗಮಿಸಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ,  ಕಲ್ಯಾಣ ಕರ್ನಾಟಕ ಹೆಸರಿಡಬೇಕೆಂದು ಬಹಳ ದಿನದ ಬೇಡಿಕೆ ಇತ್ತು. ನಾನು ಸಿಎಂ ಆದ  ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಘೋಷಣೆ ಮಾಡಿದ್ದೇವೆ. 6 ಜಿಲ್ಲೆಗಳಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಕಲ್ಬುರ್ಗಿಯಲ್ಲಿ ವಿಜಯೋತ್ಸವ ಆಚರಿಸುತ್ತಿದ್ದಾರೆ ಎಂದು ತಿಳಿಸಿದರು.

ಹಾಗೆಯೇ ಈ ಬಾರಿ ಅತಿವೃಷ್ಠಿಯಿಂದಾಗಿ  ತುಸು ಹಣಕಾಸಿನ ಸಮಸ್ಯೆ ಇದೆ. ಹೀಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುತ್ತೇನೆ ಎಂದು ಹೇಳಿದರು.

Key words: More -grant – next budget -development -kalyana Karnataka-CM BS Yeddyurappa