Tuesday, September 29, 2026

BDA Apartments

ಸಂತ್ರಸ್ತ ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ-ಸಿಎಂ ಸಿದ್ದರಾಮಯ್ಯ BDA JK_Adv BD...
Home Front Page ಸಂತ್ರಸ್ತ ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ-ಸಿಎಂ ಸಿದ್ದರಾಮಯ್ಯ

ಸಂತ್ರಸ್ತ ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ-ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,4,2024 (www.justkannada.in):  ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರ ರಕ್ಷಣೆ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರ ವಿರುದ್ದ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದರು.ಸಂತ್ರಸ್ತ ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ siddaramaiah123

ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words:  government, protect, women, CM Siddaramaiah