Thursday, August 13, 2026

BDA Apartments

Home Front Page ಮೈಸೂರಿನ ಕರಾಮುವಿಯಲ್ಲಿ ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ.

ಮೈಸೂರಿನ ಕರಾಮುವಿಯಲ್ಲಿ ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ.

ಮೈಸೂರು, ಮೇ,4,2024 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ತೀರ್ಮಾನಿಸಿದೆ.

ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕರಾಮುವಿ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ಮೇ .9 ರೊಳಗೆ ಬೆಳಗ್ಗೆ 10 ಗಂಟೆಯಿoದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂ.ಸಂ:0821-2515944 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Coaching, KAS, competitive, exams, KSOU