Tuesday, September 29, 2026

BDA Apartments

ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್ BDA JK_Ad...
Home Crime ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು  ನಿರಾಕರಿಸಿದ ಕೋರ್ಟ್

ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು  ನಿರಾಕರಿಸಿದ ಕೋರ್ಟ್

ಬೆಂಗಳೂರು,ಮೇ,4,2024 (www.justkannada.in): ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ   ಸಂತ್ರಸ್ತೆ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಹೆಚ್ ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿರಾಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಹೆಚ್ ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು  ಕೋರಿ ಅರ್ಜಿ ಸಲ್ಲಿಸಿದ್ದರು.  ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಾದ ವಿವಾದ ಆಲಿಸಿ ಜಾಮೀನು ನೀಡಲು ನಿರಾಕರಿಸಿದೆ.ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್ hd revanna

ಇದೀಗ ಶಾಸಕ ಹೆಚ್ ಡಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ.

Key words: Court, refuse, anticipatory bail,  HD Revanna