Wednesday, September 30, 2026

BDA Apartments

ಈ ವಾರವೇ SSLC ಪರೀಕ್ಷಾ ಫಲಿತಾಂಶ ಪ್ರಕಟ ಸಾಧ್ಯತೆ BDA JK_Adv BDA Adv
Home Front Page ಈ ವಾರವೇ SSLC ಪರೀಕ್ಷಾ ಫಲಿತಾಂಶ ಪ್ರಕಟ ಸಾಧ್ಯತೆ.

ಈ ವಾರವೇ SSLC ಪರೀಕ್ಷಾ ಫಲಿತಾಂಶ ಪ್ರಕಟ ಸಾಧ್ಯತೆ.

ಬೆಂಗಳೂರು,ಮೇ,6,2024 (www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾದು ಕುಳಿತಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು ಈ ವಾರವೇ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ನಾಳೆ ಲೋಕಸಭೆ ಚುನಾವಣೆ 2ನೇ ಹಂತದ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಫಲಿತಾಂಶ ವಿಳಂಬವಾಗಿದೆ.  ಮೇ 9 ಅಥವಾ 10 ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.ಈ ವಾರವೇ SSLC ಪರೀಕ್ಷಾ ಫಲಿತಾಂಶ ಪ್ರಕಟ ಸಾಧ್ಯತೆ result

ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಕೊಂಚ ತಡವಾಗಿ ಪ್ರಕಟವಾಗುತ್ತಿದೆ ಎನ್ನಲಾಗಿದೆ. ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಪ್ರಕಟಗೊಂಡ ನಂತರ kseab.karnataka.gov.in ಹಾಗೂ karresults.in ವೆಬ್ ಸೈಟ್ ಗಳಲ್ಲಿ ನೋಡಬಹುದಾಗಿದೆ.

Key words: SSLC -exam -result – declared -this week