Thursday, August 6, 2026

BDA Apartments

Home Election 2024 ಮತದಾನಕ್ಕೆ ಧಾರವಾಡ ಪ್ರವೇಶಿಸಲು ವಿನಯ್ ಕುಲಕರ್ಣಿಗೆ ಅನುಮತಿ ನೀಡಿದ ಹೈಕೋರ್ಟ್.

ಮತದಾನಕ್ಕೆ ಧಾರವಾಡ ಪ್ರವೇಶಿಸಲು ವಿನಯ್ ಕುಲಕರ್ಣಿಗೆ ಅನುಮತಿ ನೀಡಿದ ಹೈಕೋರ್ಟ್.

ಬೆಂಗಳೂರು,ಮೇ,7,2024 (www.justkannada.in): ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು ಈ ನಡುವೆ ಮತದಾನ ಮಾಡಲು ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಮತದಾನ ಮಾಡಲು ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಮನವಿ ಮಾಡಿದ್ದರು. ಇದೀಗ ಹೈಕೋರ್ಟ್ ನ್ಯಾ.ಎಂ.ಜೆ ಉಮಾ ನೇತೃತ್ವದ ಏಕಸದಸ್ಯ ಪೀಠ ಅನುಮತಿ ನೀಡಿದೆ. ಅಲ್ಲದೆ ಇಂದು ಮತದಾನ ಮಾಡಿ ತಕ್ಷಣವೇ ಹಿಂದಿರುಗಲು ಹೈಕೋರ್ಟ್  ಸೂಚನೆ ನೀಡಿದೆ ಎನ್ನಲಾಗಿದೆ.

ಧಾರವಾಡ ಬಿಜೆಪಿ ಮುಖಂಡ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಿದಂತೆ ನಿರ್ಬಂಧ ವಿಧಿಸಲಾಗಿದೆ.

Key words: High Court, Vinay Kulkarni, Dharwad, voting