Saturday, August 22, 2026

BDA Apartments

Home Front Page ಇಂದು ರಾಜ್ಯದ ಹಲವೆಡೆ ಭಾರಿ ಮಳೆ: ಯಲ್ಲೋ ಅಲರ್ಟ್ ಘೋಷಣೆ.

ಇಂದು ರಾಜ್ಯದ ಹಲವೆಡೆ ಭಾರಿ ಮಳೆ: ಯಲ್ಲೋ ಅಲರ್ಟ್ ಘೋಷಣೆ.

ಬೆಂಗಳೂರು,ಮೇ,8,2024 (www.justkannada.in): ಬಿರು ಬಿಸಿಲಿನಿಂದ ಕಂಗೆಟ್ಟಿದ ಜನತೆಗೆ ಇದೀಗ ವರುಣ ಕೃಪೆ ತೋರುತ್ತಿದ್ದಾನೆ. ಕಳೆದ ವಾರದಿಂದ ಹಲವೆಡೆ ಮಳೆಯಾಗುತ್ತಿದ್ದು ಇದೀಗ ಇಂದು ಸಹ ಮಳೆಯಾಗಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ತುಮಕೂರು, ಶಿವಮೊಗ್ಗ, ರಾಮನಗರ, ಚಿತ್ರದುರ್ಗ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಕಲಬುರಗಿಯಲ್ಲಿ 44.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Key words: Heavy -rain – state-today