Saturday, August 22, 2026

BDA Apartments

Home Front Page ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಕೆಶಿ ಕೈವಾಡ ಆರೋಪ: ಮೈಸೂರಿನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ.

ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಕೆಶಿ ಕೈವಾಡ ಆರೋಪ: ಮೈಸೂರಿನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ.

ಮೈಸೂರು,ಮೇ,8,2024 (www.justkannada.in): ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ  ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಕೆ ಶಿವಕುಮಾರ್  ಕೈವಾಡವಿದೆ ಎಂದು ಆರೋಪಿಸಿ ರಾಜ್ಯದ ಹಲವೆಡೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಗಿಳಿದಿದ್ದಾರೆ.

ರಾಮನಗರ ಮೈಸೂರು ದೇವನಹಳ್ಳಿಯಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದ್ದು ಈ ನಡುವೆ ಮೈಸೂರಿನಲ್ಲಿ ಶಾಸಕ ಜಿ.ಟಿ ದೇವೇಗೌಡರ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಮಾಜಿ ಶಾಸಕ ಸಾರಾ ಮಹೇಶ್ ಸೇರಿ ಹಲವು ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಪೆನ್ ಡ್ರೈವ್ ಹಂಚಿದ ಮಹಾನಾಯಕನನ್ನ ಬಂಧಿಸಿ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ.

Key words: DK Shivakumar, JDS, protest, Mysore