Sunday, August 23, 2026

BDA Apartments

Home Front Page ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಡಿಸಿಎಂ ಡಿಕೆ ಶಿವಕುಮಾರ್ ಕಿಡಿ.

ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಡಿಸಿಎಂ ಡಿಕೆ ಶಿವಕುಮಾರ್ ಕಿಡಿ.

ಬೆಂಗಳೂರು,ಮೇ,8,2024 (www.justkannada.in): ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೈವಾಡ  ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಕೇಸಿನ ಹಿಂದೆ ಇರುವುದು ಬ್ಲಾಕ್‌ ಮೇಲ್‌ ಕಿಂಗ್‌ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್‌ ಮೇಲ್‌ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ ಎಂದು ಗುಡುಗಿದ್ದಾರೆ.

ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್‌ ಅಂಡ್‌ ರನ್‌ ಮಾಡ್ತಿದ್ದಾರೆ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ‘ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ?’ ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: Prajwal Revanna, case, HDK, DK Shivakumar