Saturday, September 19, 2026

BDA Apartments

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 4ನೇ ಆರೋಪಿ ಬಂಧನ BDA JK_Adv BDA Adv
Home Front Page ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 4ನೇ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 4ನೇ ಆರೋಪಿ ಬಂಧನ

ಮಂಗಳೂರು, ಮೇ 10,2024 (www.justkannada.in):   ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಎನ್ ಐಎ ಅಧಿಕಾರಿಗಳು ನಾಲ್ಕನೇ ಆರೋಪಿಯನ್ನು ಬಂಧಿಸಿದ್ದಾರೆ.

ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ಬಂಧಿತ ಆರೋಪಿ. ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಆನೆಮಹಲ್ ಬಳಿ ಎನ್ ಐಎ ಅಧಿಕಾರಿಗಳು ಮುಸ್ತಾಫ ಪೈಚಾರ್ ನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ praveen

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬುವವರನ್ನ, ಕೋಳಿ ಅಂಗಡಿ ಬಳಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್​ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು.

Key words: Praveen Nettaru, murder, case, arrested