Thursday, August 6, 2026

BDA Apartments

Home Front Page ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಸೋಲುವ ಭಯದಿಂದ ಮೋದಿ ಮಾತು-ಸಿಎಂ ಸಿದ್ದರಾಮಯ್ಯ.

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಸೋಲುವ ಭಯದಿಂದ ಮೋದಿ ಮಾತು-ಸಿಎಂ ಸಿದ್ದರಾಮಯ್ಯ.

ಮೈಸೂರು,ಮೇ,11,2024 (www.justkannada.in): ವಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ  ನರೇಂದ್ರ ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ  ಸಿಎಂ ಸಿದ್ದರಾಮಯ್ಯ, ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ಸೋಲುವ ಭಯದಿಂದ ಮೋದಿ ಮಾತನಾಡುತ್ತಿದ್ದಾರೆ ಎಂದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಮೋದಿ ಅವರು 10 ವರ್ಷ ಬಡವರ ಪರ ಕೆಲಸ ಮಾಡಿಲ್ಲ. ಕೊಟ್ಟ ಭರವಸೆ ಈಡೇರಿಸಿಲ್ಲ. ದೇಶದ ಪ್ರಧಾನ ಮಂತ್ರಿಯನ್ನು ಸೋಲಿಸಬೇಕು ಎಂಬುದು ವಿರೋಧ ಪಕ್ಷಗಳ ಬಯಕೆ. ಪ್ರಧಾನಿ ಮೋದಿ ಸೋಲುವ ಭಯದಿಂದ ಹತಾಶೆಯಿಂದ  ಮಾತನಾಡುತ್ತಿದ್ದಾರೆ. ಪ್ರಧಾನಿ ಸುಳ್ಳಿನ ಸರದಾರ ಎಂಬುದು ಎಲ್ಲರಿಗು ಗೊತ್ತಿದೆ. ಅವರ ಬಣ್ಣ ದೇಶದ ಜನರ ಮುಂದೆ ಬಯಲಾಗಿದೆ. ಈ ಹತಾಶೆಯಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ. ಇವರ ಎಮೋಷನಲ್ ಮಾತುಗಳು ಜನರಿಗೆ ಗೊತ್ತಿದೆ, ಮೇಲಕ್ಕೆ ಏರಿದವರು ಕೆಳಗೆ ಇಳಿಯಬೇಕು ಎಂದು ಟಾಂಗ್ ಕೊಟ್ಟರು.

ಸಾಲ ಮನ್ನಾ ಮಾಡಬೇಕು  ಎಂಬ ಬಿಎಸ್ ಯಡಿಯೂರಪ್ಪ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸಾಲ ಮನ್ನಾ ಮಾಡಿ ಎಂದು ಹಿಂದೆ ಕೇಳಿದಾಗ ಯಡಿಯೂರಪ್ಪ ಏನು ಹೇಳಿದ್ದರು ಗೊತ್ತಾ. ನಮ್ಮ ಬಳಿ ಪ್ರಿಂಟಿಂಗ್ ಮಿಷನ್ ಇದಿಯ ಎಂದು ಕೇಳಿರಲಿಲ್ಲವಾ. ಈಗ ಸಾಲಮನ್ನಾ ಮಾಡಿ ಎಂದು ಕೇಳುವ ನೈತಿಕತೆ ಇವರಿಗಿದೆಯಾ..?  ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಾಲಮನ್ನಾ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Key words:  Modi, speaks, fear, CM Siddaramaiah