Wednesday, September 30, 2026

BDA Apartments

Mysore Dasara Festival BDA JK_Adv BDA Adv
Home Crime ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ FSL ತಂಡ ಭೇಟಿ.

ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ FSL ತಂಡ ಭೇಟಿ.

ಹಾಸನ,ಮೇ,13,2024 (www.justkannada. In):  ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ ಎಫ್ ಎಸ್ ಎಲ್ ತಂಡ ಭೇಟಿ ನೀಡಿದೆ.

ಹಾಸನದ ಎಸ್ಪಿ ಕಚೇರಿ ಪಕ್ಕದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ FSL ತಂಡ ಭೇಟಿ ನೀಡಿದ್ದು ಸ್ಯಾಂಪಲ್ ಸಂಗ್ರಹಿಸುತ್ತಿದ್ದಾರೆ. ಬೆರಳಚ್ಚು ತಜ್ಞರು ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ FSL ತಂಡ ಭೇಟಿ fsl

ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ  ವಿದೇಶದಲ್ಲಿದ್ದು, ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ನಡೆಸುತ್ತಿದೆ. ಎಸ್ ಐಟಿ ತಂಡ ಸಹ ನಿವಾಸದಲ್ಲಿ ಸಂತ್ರಸ್ತೆ ಕರೆತಂದು ಮಹಜರು ಮಾಡಿತ್ತು. ಇನ್ನು ಸಂತ್ರಸ್ತ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದು ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.

Key words: FSL team, visit , MP Prajwal Revanna, residence